ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರು ಕೊರೋನಾದಿಂದ ನಿಧನರಾಗಿದ್ದಾರೆಂದು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಸಿಎಂ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕ ಟ್ಬಿಟ್ ನಲ್ಲಿ ಸ್ಪಷ್ಟಪಡಿಸಿದೆ.
ಇದೀಗ ದೆಹಲಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ವೀಟಿಸಿ, ‘ ಅಶೊಕ್ ಗಸ್ತಿಯವರ ನಿಧನದ ಕುರಿತು ಕೆಲವು ವರದಿಗಳು ಪ್ರಸಾರವಾಗುತ್ತಿವೆ. ಆದರೆ ಅದು ಸುಳ್ಳು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಬೇಗ ಗಸ್ತಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ’ ಎಂದು ಪೋಸ್ಟ್ ಮಾಡಿದ್ದಾರೆ.
ಆರೋಗ್ಯ ಸ್ಥಿತಿ ಗಂಭೀರ – ಡಾ. ರೈ
ಈ ನಡುವೆ ಮಣಿಪಾಲ್ ಆಸ್ಪತ್ರೆಯ ಡಾ.ಮನೀಶ್ ರೈ ಹೇಳಿಕೆ ಬಿಡುಗಡೆ ಮಾಡಿ ರಾಜ್ಯ ಸಭಾ ಸದಸ್ಯ ಅಶೋಕ್ ಗಸ್ತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬಹು ಅಂಗಾಂಗ ಗಳ ವೈಫಲ್ಯ ದಿಂದ ಬಳಲುತ್ತಿರುವ ಗಸ್ತಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ರೈ ಹೇಳಿದ್ದಾರೆ.
More Stories
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ