ಅರ್ಜಿ ಸಲ್ಲಿಕೆಯಾದ 10 ದಿನಗಳೊಳಗೆ ಕೋವಿಡ್ ಸಂತ್ರಸ್ತರ ಕುಟುಂಬದವರಿಗೆ ಪರಿಹಾರ ನೀಡಲು ಕ್ರಮವಹಿಸಬೇಕು ಹೀಗೆಂದು ಆದೇಶ ಮಾಡಿರುವ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಕೊರೊನಾ ಸಂತ್ರಸ್ತರ ಕುಟುಂಬ ಸದಸ್ಯರಿಗೆ ಪರಿಹಾರ ಪಾವತಿಗೆ ಅನುಕೂಲವಾಗುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ (ಎಸ್‌ಎಲ್‌ಎಸ್‌ಎ) ಸದಸ್ಯ ಕಾರ್ಯದರ್ಶಿಯೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಕೋರ್ಟ್ ಸಲಹೆ ನೀಡಿದೆ.
ನ್ಯಾಯಮೂರ್ತಿಗಳಾದ ಎಂ.ಆರ್.ಷಾ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು, ಇಂದಿನಿಂದ ಒಂದು ವಾರದೊಳಗೆ ಎಸ್‌ಎಲ್‌ಎಸ್‌ಎಗೆ ಹೆಸರು, ವಿಳಾಸ ಮತ್ತು ಮರಣ ಪ್ರಮಾಣ ಪತ್ರದಂತಹ ಸಂಪೂರ್ಣ ವಿವರಗಳನ್ನು ಹಾಗೂ ಅನಾಥರಿಗೆ ಸಂಬಂಧಿಸಿದ ವಿವರಗಳನ್ನು ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಪರಿಹಾರ ಕೋರಿ ಬಂದಿರುವ ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಗಾಗಿ ತಿರಸ್ಕರಿಸಬಾರದು. ಯಾವುದೇ ತಾಂತ್ರಿಕ ದೋಷ ಕಂಡುಬಂದರೂ, ಸಂತ್ರಸ್ತರಿಗೆ ಸಾಂತ್ವನ ಮತ್ತು ಪರಿಹಾರವನ್ನು ಒದಗಿಸುವುದು ಕಲ್ಯಾಣ ರಾಜ್ಯದ ಅಂತಿಮ ಗುರಿಯಾಗಿದೆ. ಹೀಗಾಗಿ ದೋಷಗಳನ್ನು ಸರಿಪಡಿಸಲು ಅವರಿಗೆ ಅವಕಾಶ ನೀಡಬೇಕು ಎಂದು ತಿಳಿಸಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು