ರೈಲಿಗೆ ಸಿಲುಕಿ ತಂದೆ, ಸಿದ್ದಗಂಗಯ್ಯ (62), ಸುನಂದಮ್ಮ ಹಾಗೂ ಅವರ ಪುತ್ರಿ ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು .
ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ಘಟನೆ ನಡೆದಿದೆ. ಇವರು ತುಮಕೂರಿನ ಮರಳೂರು ನಿವಾಸಿಗಳು.
ಕಳೆದ ಎರಡು ವರ್ಷಗಳ ಹಿಂದೆ ಕೆಇಬಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಸಿದ್ದಗಂಗಯ್ಯ ಸಾಕಷ್ಟು ಸಾಲ ಮಾಡಿಕೊಂಡಿದ್ದರು.
ಕೆಇಬಿ ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಜೀವನೋಪಾಯಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈಲು ಸಿಕ್ಕಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದೆ.ಬೆಂಗಳೂರಿನಲ್ಲಿ ನಟ ನಾಗಭೂಷಣ ಕಾರು ಅಪಘಾತ- ಮಹಿಳೆ ಸಾವು
ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು