crime

ಸಾಲಕ್ಕೆ ಹೆದರಿ ತುಮಕೂರಿನ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ : ತಂದೆ-ತಾಯಿ, ಮಗಳ ದುರಂತ ಸಾವು

ತುಮಕೂರು: ಸರ್ಕಾರಿ ನೌಕರನಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವ್ಯಕ್ತಿಯ ಕುಟುಂಬವು ಸಾಲದ ಶೂಲಕ್ಕೆ ಸಿಲುಕಿ, ಕುಟುಂಬದ ಮೂವರು ಸದಸ್ಯರೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

ರೈಲಿಗೆ ಸಿಲುಕಿ ತಂದೆ, ಸಿದ್ದಗಂಗಯ್ಯ (62), ಸುನಂದಮ್ಮ ಹಾಗೂ ಅವರ ಪುತ್ರಿ ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು .

ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ಘಟನೆ ನಡೆದಿದೆ. ಇವರು ತುಮಕೂರಿನ ಮರಳೂರು ನಿವಾಸಿಗಳು.

ಕಳೆದ ಎರಡು ವರ್ಷಗಳ ಹಿಂದೆ ಕೆಇಬಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಸಿದ್ದಗಂಗಯ್ಯ ಸಾಕಷ್ಟು ಸಾಲ ಮಾಡಿಕೊಂಡಿದ್ದರು.

ಕೆಇಬಿ ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಜೀವನೋಪಾಯಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲು ಸಿಕ್ಕಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದೆ.ಬೆಂಗಳೂರಿನಲ್ಲಿ ನಟ ನಾಗಭೂಷಣ ಕಾರು ಅಪಘಾತ- ಮಹಿಳೆ ಸಾವು

ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Team Newsnap
Leave a Comment

Recent Posts

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024