December 22, 2024

Newsnap Kannada

The World at your finger tips!

crime , suicide , news

Family feud: Husband commits suicide after wife hangs herself ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ

ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ

Spread the love

ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಪತಿ ಕೆಲಸಕ್ಕೆ ತೆರಳಿದ್ದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಶರಣಾಗಿದ್ದಾನೆ.

ಮೈಸೂರಿನ ಖಾಸಗಿ ಕಂಪನಿಯಲ್ಲಿ ಪುರುಷೋತ್ತಮ್ ಉದ್ಯೋಗ ಮಾಡುತ್ತಿದ್ದ. ದಂಪತಿ ನಡುವೆ ಆಗಾಗ ಕಲಹಗಳು ನಡೆಯುತ್ತಿತ್ತು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಾಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ದಂಪತಿಗೆ 7 ಹಾಗೂ 5 ವರ್ಷದ ಮಕ್ಕಳಿದ್ದಾರೆ.

ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನ ಶವ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ

Copyright © All rights reserved Newsnap | Newsever by AF themes.
error: Content is protected !!