ಅಮೇರಿಕಾ ಮೇರಿಲ್ಯಾಂಡ್ ನಲ್ಲಿ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ನಿಗೂಢ ಸಾವು

Team Newsnap
1 Min Read

ಮೇರಿಲ್ಯಾಂಡ್ : ಅಮೇರಿಕಾದ ಮೇರಿಲ್ಯಾಂಡ್ ನ ಬಾಲ್ಟಿಮೋರ್ ನಗರದಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಪತಿ, ಪತ್ನಿ ಹಾಗೂ ಗಂಡು ಮಗು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಯೋಗೇಶ್ ಹೊನ್ನಾಳ(37), ಪ್ರತಿಭಾ ಹೊನ್ನಾಳ್(35) ಹಾಗೂ ಯಶ್ ಹೊನ್ನಾಳ್(6) ಮೃತರು.

ಕಳೆದ 9 ವರ್ಷಗಳ ಹಿಂದೆ ಮದುವೆಯಗಿದ್ದ ಈ ದಂಪತಿಗಳು ಮೇರಿಲ್ಯಾಂಡ್ ನಲ್ಲಿ ವಾಸವಾಗಿದ್ದರು.ಮೃತ ಪತಿ ಹಾಗೂ ಪತ್ನಿ ಇಬ್ಬರೂ ವೃತ್ತಿಯಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೂವರ ಸಾವಿನ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟಿಸಿದೆ.ಅಕ್ಟೋಬರ್ 16 ರಿಂದ ಶ್ರೀರಂಗಪಟ್ಟಣ ದಸರಾ: ಸಚಿವ ಚಲುವರಾಯಸ್ವಾಮಿ 

ಮೃತದೇಹಗಳನ್ನು ಸ್ವದೇಶಕ್ಕೆ ತರಿಸಿಕೊಡುವಂತೆ ಮೃತರ ಕುಟುಂಬಸ್ಥರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Share This Article
Leave a comment