ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ವೀಡಿಯೋ ಕರೆ ಮಾಡಿ, ಶಿವಮೊಗ್ಗ ಜೈಲು ವಾಡ೯ನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ವಸತಿ ಗೃಹದಲ್ಲಿ ನಡೆದಿದೆ.
ಕೇಂದ್ರ ಕಾರಾಗೃಹದ ವಾರ್ಡನ್ ಅಸ್ಪಾಕ್ ತಗಡಿ (24) ಆತ್ಮಹತ್ಯೆ ಮಾಡಿಕೊಂಡವರು.
ಅಸ್ಪಾಕ್ ತಗಡಿ ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೇರಿ ನಿವಾಸಿ. ಕಳೆದ ಎರಡೂವರೆ ವರ್ಷದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿದ್ದ ಅಸ್ಪಾಕ್ ತಗಡಿಗೆ ಒಂದೂವರೆ ತಿಂಗಳ ಮಗುವಿದ್ದು, ಪತ್ನಿ ಬಾಣಂತನಕ್ಕೆ ತವರು ಮನೆಗೆ ತೆರಳಿದ್ದರು.
ವಿವಾಹವಾದ ಎರಡು ಮೂರು ತಿಂಗಳ ನಂತರದಿಂದಲೇ ಸಣ್ಣ ಪುಟ್ಟ ವಿಷಯಕ್ಕೆ ಪತಿ ಪತ್ನಿ ಇಬ್ಬರು ಜಗಳ ಆಡುತ್ತಿದ್ದರು ಎನ್ನಲಾಗಿದೆ.
ಬುಧವಾರ ರಾತ್ರಿ ಸಹ ಪತ್ನಿಗೆ ವೀಡಿಯೋ ಕರೆ ಮಾಡಿದ್ದ ಅಸ್ಪಾಕ್ ತಗಡಿ ಈ ವೇಳೆಯೂ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಅಲ್ಲದೇ ಅತ್ತೆ ಮಾವನೊಂದಿಗೂ ಸಹ ಜಗಳವಾಡಿದ್ದಾನೆ ಎನ್ನಲಾಗಿದೆ.
ಜಗಳ ಆಡುತ್ತಿರುವಾಗಲೇ ನೇಣು ಹಾಕಿಕೊಳ್ಳುವ ದೃಶ್ಯವನ್ನು ಪತ್ನಿಗೆ ತೋರಿಸಿದ್ದಾನೆ. ಪತಿಯ ಆತ್ಮಹತ್ಯೆ ನಿರ್ಧಾರಕ್ಕೆ ಕಂಗಾಲಾದ ಪತ್ನಿ ನಂತರ ಕಾರಾಗೃಹದ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ.
ವಿಷಯ ತಿಳಿದು ಇತರೆ ಸಿಬ್ಬಂದಿ ವಸತಿಗೃಹಕ್ಕೆ ತೆರಳಿ ನೋಡುವಷ್ಟರಲ್ಲಿ ಅಸ್ಪಾಕ್ ತಗಡಿ ಕೊನೆಯುಸಿರು ಎಳೆದಿದ್ದಾನೆ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ