ಸಿನಿಮಾದ ಐಟಂ ಸಾಂಗ್‍ಗೆ ಚಾಮರಾಜನಗರದಲ್ಲಿ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಕೊಳ್ಳೇಗಾಲ DYSP ನಾಗರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮುದೋಳ್ PSI ಚೇತನ್ ಹಾಗು ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗಳು ನೃತ್ಯ ಮಾಡಿದ್ದಾರೆ.
ಐಟಂ ಸಾಂಗ್ ಕುಣಿತದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸಬ್ ಇನ್ಸ್ ಪೆಕ್ಟರ್ ಅಶೋಕ್ ವರ್ಗಾವಣೆ ಹಿನ್ನೆಲೆ, ಖಾಸಗಿ ರೆಸಾರ್ಟ್‍ನಲ್ಲಿ ಬೀಳ್ಕೊಡುಗೆ ಪಾನಗೋಷ್ಠಿ ನಡೆಸಲಾಗಿದೆ.
ಈ ಬೀಳ್ಕೊಡುಗೆ ಪಾರ್ಟಿಯಲ್ಲಿ ಮದ್ಯದ ನಶೆಯಲ್ಲಿ ಪೊಲೀಸ್ ಅಧಿಕಾರಿಗಳು ತೇಲಾಡಿದ್ದಾರೆ
ಪೊಲೀಸ್ ಅಧಿಕಾರಿಗಳಿಂದ ಅಸಭ್ಯ ರೀತಿಯಲ್ಲಿ ನೃತ್ಯ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಸರ್ಕಾರಿ ನೌಕರರಿಗೆ ತರವಲ್ಲದ ವರ್ತನೆ ಮಾಡಿದ್ದಾರೆಂಬ ಆರೋಪವಿದೆ.
ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಶಿಷ್ಠಾಚಾರದಂತೆ ಶಿಸ್ತು ಪಾಲಿಸದೆ ಅಶಿಸ್ತು ಪ್ರದರ್ಶನ ಮಾಡಿದ್ದಾರೆ. ಕರ್ನಾಟಕ ಸೇವಾ ನಡೆತೆ ನಿಯಮ ಉಲ್ಲಂಘನೆಯಾಗಿದೆ. ಹೀಗಾಗಿ ಮೋಜು ಮಸ್ತಿ ಮಾಡಿದ ಪೋಲಿಸ್ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ