ಬರಗಾಲ ಬಂದರೆ ಸಾಲ ಮನ್ನಾ ಆಗುತ್ತೆ ಎಂಬ ಧೋರಣೆ ರೈತರದ್ದು : ಸಚಿವ ಪಾಟೀಲ್

Team Newsnap
1 Min Read

ಅಥಣಿ:
ರೈತರಿಗೆ ಪರಿಹಾರ ನೀಡಿದ ನಂತರ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಶಿವಾನಂದ್ ಪಾಟೀಲ್ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

ಈ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿ, ವಿರೋಧ ಪಕ್ಷ ವಾಗ್ದಾಳಿ ಗುರಿಯಾಗಿದೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ. ಏಕೆಂದರೆ ಸಾಲ ಮನ್ನಾದ ಲಾಭ ಪಡೆಯಲು ರೈತರು ಕಾಯುತ್ತಾರೆ ಎಂದು ಹೇಳಿದರು

ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟು ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜವನ್ನೂ ಕೊಟ್ಟರು, ಗೊಬ್ಬರವನ್ನೂ ಕೊಟ್ಟರು. ಇನ್ನೂ ರೈತರಿಗೆ ಒಂದೆ ಆಸೆ ಇದೆ ಏನಪ್ಪಾ ಎಂದರೆ, ಮ್ಯಾಲ ಮ್ಯಾಲ ಬರಗಾಲ ಬೀಳಲಿ ಎಂದು. ಏಕೆಂದರೆ, ಸಾಲ ಮನ್ನಾ ಆಗುತ್ತೆ ಅಂದು. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿವೆ. ಆದರೆ, ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯ. ಸರ್ಕಾರ ಸದಾ ನೆರವಿಗೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಹಿಂದೆ ವಿವಾದಾದ್ಮಕ ಹೇಳಿಕೆ ನೀಡಿದ್ದ ಶಿವಾನಂದ ಪಾಟೀಲ್ ಅವರು, ಕುಡಿದು ಕುಡಿದು ಸತ್ತರೂ, ಹೃದಯಾಘಾತದಿಂದ ಸತ್ತರೂ ಆತ್ಮಹತ್ಯೆ ಎಂದು ದೂರು ಕೊಟ್ಟರೇ ಪರಿಹಾರ ಸಿಗುತ್ತೆ ಎನ್ನುವ ದುರಾಸೆ ಸಂಬಂಧಿಕರದ್ದು.

ರೈತರು ಇಂದಿನಿಂದಲ್ಲ ಹಿಂದಿನಿಂದಲೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ನಾವು 2015 ರಲ್ಲಿ ಐದು ಲಕ್ಷ ಪರಿಹಾರ ಕೊಡಲು ಶುರು ಮಾಡಿದ್ದೇವೆ. ಅವತ್ತಿನಿಂದ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದರು.

Share This Article
Leave a comment