ರೈತರ ಸಾಲ ಮರು ಪಾವತಿ ಅವಧಿ ವಿಸ್ತರಣೆಗೆ ಮಾಜಿ ಮಂತ್ರಿ ಚಲುವರಾಯಸ್ವಾಮಿ ಆಗ್ರಹ

Team Newsnap
1 Min Read

ಕೋವಿಡ್ ಮಹಾಮಾರಿಯಿಂದ
ರೈತರು ತೀವ್ರ ಸಂಕಷ್ಟದಲ್ಲಿ ಇರುವುದರಿಂದ ಬ್ಯಾಂಕುಗಳು ಸೇರಿದಂತೆ ಇತರೆಡೆ ಪಡೆದಿರುವ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸವಂತೆ ಮಾಜಿ ಸಚಿವ ಚಲುವರಾಯಸ್ವಾಮಿ ಸರ್ಕಾರ ವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಚಲುವರಾಯಸ್ವಾಮಿ, ರಾಜ್ಯ ಸರ್ಕಾರ ರೈತರ ಎಲ್ಲಾ ಸಾಲಗಳ ಮರು ಪಾವತಿಯನ್ನು ಮೂರು ತಿಂಗಳ ಕಾಲ ಮುಂದೂಡಿರುವುದು ಸ್ವಾಗತಾರ್ಹ. ಆದರೆ ಇದೇ ಅವಧಿಯ ಸಾಲವನ್ನು ಜೂ
೩೦ ರೊಳಗೆ ನೀಡಬೇಕೆಂದು ತಿಳಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

5cb5cfb2 01e4 4559 9087 27b189c0e62e edited

ಕರೋನಾ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಚೆಗೆ ತರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಮೀನಿನಲ್ಲಿಯೇ ಬೆಳೆಗಳು ಕೊಳೆಯುವಂತಹ ಸನ್ನಿವೇಶ ಎದುರಾಗಿದೆ. ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದಂತಹ ಪರಿಸ್ಥಿತಿ ಉದ್ಬವವಾಗಿದ್ದು ,ರೈತರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಆದಕಾರಣ ಕೂಡಲೇ ರಾಜ್ಯ ಸರಕಾರ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು.ರೈತರು ಪಡೆದಿರುವ ಎಲ್ಲಾ ಮಾದರಿಯ ಸಾಲಗಳ ಮರುಪಾವತಿಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

Share This Article
Leave a comment