ತ. ನಾಡಿಗೆ ನೀರು – ಮಂಡ್ಯದ ಬಳಿ ರೈತರ ಪ್ರತಿಭಟನೆ – ಪೋಲಿಸರಿಂದ ಬಂಧನ

Team Newsnap
1 Min Read

ಮಂಡ್ಯ : ಕಬಿನಿ ಮತ್ತು ಕೆ ಆರ್ ಎಸ್ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲೂಕಿನ ಇಂಡುವಾಳು ಬಳಿ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ಮಂಗಳವಾರ ಬಂಧಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಮಂಜೇಶ್ ಗೌಡ, ಸೊ.ಶಿ. ಪ್ರಕಾಶ್, ಬನ್ನೂರು ನಾರಾಯಣ, ಸಿದ್ದೇಗೌಡ, ಇ.ಬಸವರಾಜ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಮೇಶ್ ಗೌಡ ಸೇರಿ ನೂರಾರು ರೈತರನ್ನು ಪೊಲೀಸರು ಬಂದಿಸಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಶಾಲಾ ಆವರಣ ದಿಂದ ಮೆರವಣಿಗೆ ಹೊರಟು ಸರ್ವಿಸ್ ರಸ್ತೆಯಲ್ಲಿ ಸಾಗಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಜಿಲ್ಲಾ ಶಾಸಕರು ಮತ್ತು ಸಂಸದರ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು

ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿರು. ಅರ್ಧ ತಾಸಿಗೂ ಹೆಚ್ಚು ಸಮಯ ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು.

ಘೋಷಣೆ ಮೊಳಗಿಸುತ್ತ ರೈತರು ಎಕ್ಸ್‌ಪ್ರೆಸ್‌ ಹೈವೆ ಗೆ ನುಗ್ಗಲು ಮುಂದಾದಾಗ ಪೊಲೀಸರು ತಡೆದರು.ಈ ವೇಳೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದು ಪರಸ್ಪರ ತಳ್ಳಾಟ- ನೂಕಾಟ ಉಂಟಾಗಿ ಪೊಲೀಸರು ಪ್ರತಿಭಟನಾ ನಿರತ ರೈತರನ್ನು ಬಲಪ್ರಯೋಗಿಸಿ ಬಂದಿಸಿದರು,ಈ ವೇಳೆ ಐದಾರು ರೈತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬೆಂಗಳೂರು ಸೇರಿ 14 ವಿವಿಧ ಸ್ಥಳಗಳಲ್ಲಿ ಸರ್ವೇ ಅಧಿಕಾರಿ ಮನೆ, ಕಚೇರಿ ಮೇಲೆ ‘ಲೋಕಾ’ ದಾಳಿ

ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ ಹಾಕಲಾಗಿತ್ತು

Share This Article
Leave a comment