ನಾಳೆ ನಡೆಯುವ ಅಧಿವೇಶನದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಕೃಷಿ ಕಾಯ್ದೆ ವಾಪಸ್ ಪಡೆಯುವವರೆಗೆ ನಿರಂತರ ಹೋರಾಟ ಮಾಡುತ್ತೇವೆ. ಸುಮ್ಮನೆ ಕೈ ಕಟ್ಟಿ ಕುಳಿತು ಕೊಳ್ಳುವ ಮಾತೇ ಇಲ್ಲ. ಬಂಧನಕ್ಕೂ ಹೆದರಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಚಂದ್ರಶೇಖರ್ ರೈತ ವಿರೋಧಿ ಕೃಷಿ ಕಾಯ್ದೆ ಕೇಂದ್ರ ಸರ್ಕಾರವೇ ಹಿಂಪಡೆದಿದೆ. ರಾಜ್ಯ ಸರ್ಕಾರವೂ ಕೂಡಾ ವಾಪಸ್ ಪಡೆಯಬೇಕು. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆಂದು ಹೇಳಿದರು.
ಕೇಂದ್ರ ಸರ್ಕಾರ ರೈತರ ಒಂದು ವರ್ಷ ಹೋರಾಟ ನೋಡಿ ಕೃಷಿ ಕಾಯ್ದೆ ವಾಪಸ್ ಪಡೆದಿದ್ದಾರೆ. ರಾಜ್ಯ ಸರ್ಕಾರವೂ ಕೂಡ ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯುತ್ತಾರೆ ಅಂತಾ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಈ ಅಧಿವೇಶನದಲ್ಲಿ ಈ ವಿಷಯ ಮಂಡನೆ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೇವೆ. ಆದರೆ ಸರ್ಕಾರದ ನಡುವಳಿಕೆ ಬದಲಾಗಿ ಕಾಣುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ವಾಪಸ್ ಪಡೆದರೆ ರಾಜ್ಯ ಸರ್ಕಾರ ವಾಪಸ್ ಪಡೆಬೇಕು ಅಂತ ಕಾನೂನು ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಸಚಿವ ಮಾಧುಸ್ವಾಮಿ ರೈತರಿಗೆ ಕಾನೂನು ಪಾಠ ಹೇಳುತ್ತಿದ್ದಾರೆ. ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯದೇ ಇದ್ದರೆ, ಬಿಜೆಪಿ ಕಾರ್ಯಕ್ರಮ ಎಲ್ಲಿ ಇರುತ್ತದೆ ಅಲ್ಲಲ್ಲಿ ಕಪ್ಪು ಬಾವುಟ ಹಿಡಿದು ರೈತರು ಪ್ರತಿಭಟನೆ ಮಾಡುತ್ತೇವೆ. ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ದಿಲ್ಲಿ ಮಾದರಿಯ ರೈತ ಹೋರಾಟ ಮಾಡುತ್ತೇವೆ ಎಂದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ