March 9, 2026

Newsnap Kannada

The World at your finger tips!

kaveri , news , supreme

ತ ನಾಡಿಗೆ ನೀರು ಬಿಡುಗಡೆ ವಿರೋಧಿಸಿ ರಾಜ್ಯ ರೈತ ಸಂಘದಿಂದಲೂ ಸುಪ್ರೀಂ ಗೆ ಇಂದು ಅರ್ಜಿ

Spread the love

ಮಂಡ್ಯ : ರಾಜ್ಯ ರೈತರ ಸಂಕಷ್ಟ ಮರೆತು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ ಕೆಆರ್‌ಎಸ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಸಂಘ ಸುಪ್ರೀಂ ಕೋರ್ಟ್‍ ಗೆಅರ್ಜಿ ಸಲ್ಲಿಸಲು ಮುಂದಾಗಿದೆ.

ಕಾವೇರಿ ನೀರಿಗಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರೈತ ಸಂಘದ ಪರವಾಗಿ ಅರ್ಜಿ ಸಲ್ಲಿಸಲು ದೆಹಲಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ.

ಹಿರಿಯ ವಕೀಲ ರವಿವರ್ಮ ಅವರ ಮೂಲಕ ಸುಪ್ರೀಂಗೆ ಮಂಗಳವಾರ ಅವರು ಅರ್ಜಿ ಸಲ್ಲಿಸಲಿದ್ದಾರೆ. ಕೋರ್ಟ್ ‍ಗೆ ಕಾವೇರಿ ಕೊಳ್ಳದ ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡಲಾಗುತ್ತದೆ. ಪ್ರಸಕ್ತ ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಬಗ್ಗೆ ಕೋರ್ಟ್‍ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನಗಳಿಂದಲೇ ಪೂರ್ವ ತಯಾರಿ ಮಾಡಲಾಗಿತ್ತು. ಈ ವಿಚಾರವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಕೀಲರೊಂದಿಗೆ ಖುದ್ದು ದೆಹಲಿಗೆ ತೆರಳಿದ್ದಾರೆ.HD ರೇವಣ್ಣನ ಮೇಲೂ ಅನರ್ಹತೆ ತೂಗುಗತ್ತಿ ? ವಿಧಾನಸಭಾ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿ

ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಅಹೋರಾತ್ರಿ ಧರಣಿ ನಡೆಸುವ ಜೊತೆಗೆ ಕಾನೂನು ಹೋರಾಟವನ್ನು ಈ ಮೂಲಕ ಆರಂಭಿಸಿದ್ದಾರೆ. ಕಾವೇರಿ ನೀರಿಗಾಗಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ರಾಜ್ಯ ರೈತ ಸಂಘ ಅರ್ಜಿ ಸಲ್ಲಿಕೆಯಾದರೆ ಬುಧವಾರವೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.

error: Content is protected !!