ಹೆದ್ದಾರಿ ಟೋಲ್ ನಲ್ಲಿನ ಫಾಸ್ಟ್ ಟ್ಯಾಗ್ ರದ್ದು ತಡೆಗೆ ನಕಾರ – ಹೈಕೋರ್ಟ್

Team Newsnap
1 Min Read

ಹೆದ್ದಾರಿ ಟೋಲ್ ಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಜಾರಿಗೊಳಿಸಿರುವ ಫಾಸ್ಟ್ ಟ್ಯಾಗ್ ವ್ಯವಸ್ಥೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯ್ದೆ ನಿಯಮಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳನ್ನು ಪ್ರಶ್ನಿಸಿ ವಕೀಲೆ ಗೀತಾ ಮೀಶ್ರಾ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು.

ಇದೇ ಅರ್ಜಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ಫೆ, 15 ರಿಂದ ಫಾಸ್ಟ್ಯಾಗ್ ಕಡ್ಡಾಯಗೊಳಿಸಿರುವ ಕ್ರಮವನ್ನು ಪ್ರಶ್ನಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ, ಕೋವಿಡ್ ಸಂದರ್ಭದಲ್ಲಿ ಫಾಸ್ಟ್ಯಾಗ್ ವ್ಯವಸ್ಥೆ ಜಾರಿಗೆ ತಂದಿರುವುದು ಸ್ವಾಗತಾರ್ಹಹ. ವ್ಯವಸ್ಥೆ ಆಧುನೀಕರಣಗೊಳ್ಳಬೇಕೆಂದರೆ ಇವೆಲ್ಲ ಅಗತ್ಯವಾಗಿ ಆಗಬೇಕು ಎಂದು ಹೇಳುವ ಮೂಲಕ ಫಾಸ್ಟ್ ಸ್ಟ್ಯಾಗ್ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

Share This Article
Leave a comment