ಚೆನ್ನೈ : ಶ್ರೇಷ್ಠ ಕೃಷಿ ವಿಜ್ಞಾನಿ, ಭಾರತದ ಹಸಿರು ಕ್ರಾಂತಿಯ ಪಿತಾಮಹ ಡಾ. ಮೊಂಕೊಂಬ ಸಾಂಬಶಿವನ್ ಸ್ವಾಮಿನಾಥನ್ (98) ಬುಧವಾರ ಚೆನ್ನೈನಲ್ಲಿ ನಿಧರಾದರು.
ಸ್ವಾಮಿನಾಥನ್ ವಯೋಸಹಜವಾಗಿ ಖಾಯಲೆಗಳಿಂದ ಸಾವನ್ನಪ್ಪಿದ್ದಾರೆ. ಎಂಎಸ್ ಸ್ವಾಮಿನಾಥನ್ ಪತ್ನಿ ಮೀನಾ ಸ್ವಾಮಿನಾಥನ್ ಅವರು ಕಳೆದ ವರ್ಷ ನಿಧನರಾಗಿದ್ದರು.
ಸ್ವಾಮಿನಾಥನ್ ಅವರು ಈಗ ಮೂವರು ಪುತ್ರಿಯರಾದ ಸೌಮ್ಯ ಸ್ವಾಮಿನಾಥನ್, ಮಥುರಾ ಸ್ವಾಮಿನಾಥನ್ ಮತ್ತು ನಿತ್ಯ ಸ್ವಾಮಿನಾಥನ್ ಅವರನ್ನು ಅಗಲಿದ್ದಾರೆ.
ಸ್ವಾಮಿನಾಥನ್ ಅವರ ಅಗಲಿಕೆಗೆ ಪ್ರಧಾನಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಆಗಸ್ಟ್ 7, 1925 ರಂದು ಕುಂಭಕೋಣಂ ಜಿಲ್ಲೆಯಲ್ಲಿ ಜನಿಸಿದ ಸ್ವಾಮಿನಾಥನ್ ಅವರು ತಮ್ಮ ಸ್ವಂತ ಊರಿನಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮವು ಸ್ವಾಮಿನಾಥನ್ ಅವರನ್ನು ‘ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ’ ಎಂದು ಬಣ್ಣಿಸಿದೆ.
1960 ಹಾಗೂ 70ರ ದಶಕದಲ್ಲಿ ರಾಸಾಯನಿಕ ಹಾಗೂ ಜೈವಿಕ ತಂತ್ರಜ್ಞಾನದ ಮೂಲಕ ಅಕ್ಕಿ ಮತ್ತು ಗೋಧಿಯ ಉತ್ಪಾದನೆ ಹೆಚ್ಚಿಸಲು ರೂಪಿಸಲಾದ ಹಸಿರು ಕ್ರಾಂತಿ ಯೋಜನೆಯಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಸಿ.ಸುಬ್ರಮಣಿಯಂ, ಜಗಜೀವನ್ ರಾಮ್ ಅವರೊಂದಿಗೆ ಸ್ವಾಮಿನಾಥನ್ ಕೆಲಸ ಮಾಡಿದ್ದರು.
ಅಧಿಕ ಇಳುವರಿಯ ಭತ್ತ ಹಾಗೂ ಗೋಧಿ ತಳಿಯ ಅಭಿವೃದ್ಧಿಗಾಗಿ 1987ರಲ್ಲಿ ಅವರಿಗೆ ಜಾಗತಿಕ ಆಹಾರ ಬಹುಮಾನ ಲಭಿಸಿತ್ತು. ಅದರಿಂದ ಬಂದ ಹಣದಲ್ಲಿ ಅವರು ಚೆನ್ನೈನಲ್ಲಿ ಎಂ.ಎಸ್.ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನವನ್ನು ಆರಂಭಿಸಿದರು. 1971ರಲ್ಲಿ ರೇಮನ್ ಮ್ಯಾಗ್ಸೆಸೆ ಹಾಗೂ 1986ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ವಿಶ್ವ ವಿಜ್ಞಾನ ಪ್ರಶಸ್ತಿಗಳೂ ಅವರಿಗೆ ಸಂದಿವೆ.ರೈಲ್ವೆಯಲ್ಲಿ 2409 ಹುದ್ದೆಗಳು ಖಾಲಿ, ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ
ಇವುಗಳೊಂದಿಗೆ ಪದ್ಮ ಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳು ಸ್ವಾಮಿನಾಥನ್ ಅವರಿಗೆ ಸಂದಿವೆ. ಎಚ್.ಕೆ.ಫಿರೋದಿಯಾ ಪ್ರಶಸ್ತಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಇಂದಿರಾ ಗಾಂಧಿ ಪ್ರಶಸ್ತಿಗಳೂ ಸ್ವಾಮಿನಾಥನ್ ಅವರಿಗೆ ಲಭಿಸಿವೆ.