ಪ್ರಶ್ನೆ ಪತ್ರಿಕೆ ಸೋರಿಕೆ ನಂತರ ಮುಂದೂಡಲಾಗಿದ್ದ ಕೆಪಿಎಸ್ಸಿ
ಎಫ್ಡಿಎ ಪರೀಕ್ಷೆ ಭಾನುವಾರ ರಾಜ್ಯಾದ್ಯಂತ ನಡೆದಿದೆ, ಆದರೆ ವಿಜಯಪುರದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗೆ ನಕಲು ಮಾಡಲು ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಜಯಪುರ ನಗರದ ಜೆ.ಎಸ್.ಎಸ್ ಕಾಲೇಜಿನಲ್ಲಿ ಘಟನೆ ನಡೆದಿದೆ.
ಬ್ಲಾಕ್ ನಂಬರ್ 16ರಲ್ಲಿ ಎಫ್ಡಿಎ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ ವೇಳೆ ಅಭ್ಯರ್ಥಿಗೆ 96 ಅಂಕಗಳ ಕೀ ಉತ್ತರ ನೀಡಲಾಗಿತ್ತು ಎನ್ನಲಾಗಿದೆ ಈ ವೇಳೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಘಟನೆ ಕುರಿತಂತೆ ಮಾಹಿತಿ ನೀಡಿರುವ ವಿಜಯಪುರ ಡಿಡಿಪಿಐ ಎನ್.ವಿ.ಹೊಸೂರ್, ನಕಲಿಗೆ ಸಹಕರಿಸಿದ ಆರೋಪದಲ್ಲಿ ಜೆ.ಎಸ್.ಎಸ್ ಕಾಲೇಜಿನ ವ್ಯಕ್ತಿಯನ್ನು ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ಹೇಳಿದರು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ