ಇದನ್ನು ಓದಿ –ಮಂತ್ರಿ, ಮುಖ್ಯಮಂತ್ರಿ ಗುರಿ ಇಟ್ಟುಕೊಂಡು ಕೆಲಸ ಮಾಡ್ತಿಲ್ಲ: ವಿಜಯೇಂದ್ರ
ಈ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಜೆಡಿಎಸ್ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ.
ಜೆಡಿಎಸ್‌ನ ಎಲ್ಲ ಶಾಸಕರನ್ನು ದೇವನಹಳ್ಳಿ ಬಳಿಯಿರುವ ಖಾಸಗಿ ರೆಸಾರ್ಟ್‌ಗೆ ಶಿಫ್ಟ್ ಮಾಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ.
ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ವೇಳೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ರೆಸಾರ್ಟ್‌ಗೆ ಬರಲು ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಇಂದು ಮತ್ತು ನಾಳೆ ಎರಡು ದಿನ ರೆಸಾರ್ಟ್‌ನಲ್ಲೇ ಉಳಿಯಲಿದ್ದಾರೆ
ರಾಜ್ಯಸಭೆ ಚುನಾವಣೆ ದಿನದಂದು ನೇರವಾಗಿ ಮತದಾನಕ್ಕೆ ಹಾಜರಾಗಲು ನಿರ್ಧಾರಿಸಲಾಗಿದೆ.
ಜೆಡಿಎಸ್ ಪಾಳಯದಲ್ಲೂ ಆತಂಕ ಮುಂದುವರೆದಿದ್ದಾರೆ
ಕಾಂಗ್ರೆಸ್ ಬೆಂಬಲ ಪಡೆದು ತನ್ನ ಅಭ್ಯರ್ಥಿ ಗೆಲ್ಲಿಸಿಕೊಳ್ಳಲೇಬೇಕೆಂದು ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರ ಮನವೊಲಿಸುವ ಪ್ರಯತ್ನಗಳೂ ನಡೆದಿತ್ತು. ಇದೀಗ ಜೆಡಿಎಸ್‌ಗೆ ಅಡ್ಡ ಮತದಾನದ ಭೀತಿ ಶುರುವಾಗಿದ್ದು, ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡಲು ವರಿಷ್ಠರು ಮುಂದಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು