ಮಂಡ್ಯ : ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯದಲ್ಲಿ ಫೆಬ್ರವರಿ 23 ಮತ್ತು 24 ರಂದು ಮಾಘ ಶುದ್ಧ ಹುಣ್ಣಿಮೆಯು ಜರುಗಲಿದೆ.
ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಬುಧವಾರ ಶ್ರೀ ಶ್ರೀರಂಗಪಟ್ಟಣದ ಗಂಜಾಂನ ಶ್ರೀ ನಿಮಿಷಾಂಬ ದೇವಾಲಯದಲ್ಲಿ 2024ನೇ ಸಾಲಿನ ಮಾಘಶುದ್ಧ ಪೌರ್ಣಮಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. UAEಯ ಮೊದಲ ಹಿಂದೂ ದೇಗುಲ ಲೋಕಾರ್ಪಣೆ
ಶ್ರೀ ನಿಮಿಷಾಂಬ ದೇವರ ಮಾಘ ಶುದ್ಧ ಹುಣ್ಣಿಮೆಯ ಅಂಗವಾಗಿ ಫೆಬ್ರವರಿ 23 ಹಾಗೂ 24 ಆಗಮಿಸುವ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ವಾಹನದ ಪಾರ್ಕಿಂಗ್ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು ಕಲ್ಪಿಸಿ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಿ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ತುಷಾರಮಣಿ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಮುಜರಾಯಿ ತಹಶಿಲ್ದಾರ್ ತಮ್ಮೇಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ. ಮೋಹನ್, ನಿಮಿಷಾಂಬ ದೇವಾಲಯದ ಇಓ ಸಿ.ಜಿ. ಕೃಷ್ಣ, ಪ್ರಧಾನ ಅರ್ಚಕ ಸೂರ್ಯನಾರಾಯಣ ಭಟ್, ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಫೆ. 23, 24 ರಂದು ನಿಮಿಷಾಂಬ ದೇವರ ಮಾಘ ಶುದ್ಧ ಹುಣ್ಣಿಮೆ : ಡಾ. ಕುಮಾರ – Feb. On 23rd and 24th Nimishamba God’s Magha Pure Full Moon: Dr. Kumar
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ