‘ಹೆಣ್ಣು ಭ್ರೂಣ ಹತ್ಯೆ’ ಪ್ರಕರಣ : ಅಧಿಕೃತವಾಗಿ ‘CID’ಗೆ ಕೇಸ್ ವರ್ಗಾವಣೆ

Team Newsnap
1 Min Read

ಬೆಂಗಳೂರು : ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಸರ್ಕಾರ ಅಧಿಕೃತವಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

88 ದಿನಗಳಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 287 ಹೆಣ್ಣು ಭ್ರೂಣಗಳನ್ನು ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ .

ಪ್ರಕರಣ ಸಂಬಂಧಿತವಾಗಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬೈಯ್ಯಪ್ಪನಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಎಂ.ಪ್ರಶಾಂತ್ ಅವರು ಹೆಣ್ಣು ಭ್ರೂಣ ಹತ್ಯೆ ಕೇಸ್ ಬಗ್ಗೆ ತನಿಖೆ ನಡೆಸುತ್ತಿದ್ದರು.

ಆದೇಶದಂತೆ ಇಂದು ಅಧಿಕೃತವಾಗಿ ಸಿಐಡಿಗೆ ಕೇಸ್ ವರ್ಗಾವಣೆ ಮಾಡಲಾಗಿದೆ.ತನಿಖೆಯ ಹೊಣೆಗಾರಿಕೆ ಸಿಐಡಿ ಡಿವೈಎಸ್ಪಿ ನಾಗರಾಜ್ ಅವರಿಗೆ ವಹಿಸಲಾಗಿದೆ .ಮಂಡ್ಯ ಡಿಎಚ್ಒ ಕಿರುಕುಳದ ಶಂಕೆ: ವೈದ್ಯ ನಟರಾಜ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಇಂದು ಹೆಣ್ಣು ಭ್ರೂಣ ಹತ್ಯೆ ಕೇಸ್ ಸಂಬಂಧದ ಡೇಟಾ, ದಾಖಲೆಗಳು, ತನಿಖಾ ವರದಿಯನ್ನು ಇನ್ಸ್ ಪೆಕ್ಟರ್ ಎಂ.ಪ್ರಶಾಂತ್ ಅವರು ಸಿಐಡಿ ಡಿವೈಎಸ್ಪಿ ನಾಗರಾಜ್ ಅವರಿಗೆ ಅಧಿಕೃತವಾಗಿ ವರ್ಗಾವಣೆ ಮಾಡಿದ್ದಾರೆ.

Share This Article
Leave a comment