ಉತ್ತರ ಪ್ರದೇಶದ ಮೊರಾದಾಬಾದ್ನ ಪೊಲೀಸ್ ಅಕಾಡೆಮಿ ಭೋದಕನ ವಿರುದ್ಧ ಸುಲಿಗೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ.
ಮಹಿಳಾ ಸಬ್ ಇನ್ಸ್ಪೆಕ್ಟರ್ ಬುಲಂದರ್ಶೆಹರ್ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಆಕೆಗೆ ಈ ಭೋದಕ ನಿರಂತರವಾಗಿ ಅತ್ಯಾಚಾರ ಹಾಗೂ ಬೆದರಿಕೆ ಹಾಕುತ್ತಿದ್ದರು ಎಂದು ತಿಳಿದು ಬಂದಿದೆ.
ಆರೋಪಿ ಹಾಗೂ ಮಹಿಳಾ ಎಸ್‌ಐ ಸಂಬಂಧದಲ್ಲಿದ್ದರು ಎಂಬ ಕಾರಣಕ್ಕೆ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿಲ್ಲ.
ಇನ್ನು ಈ ವಿಚಾರವಾಗಿ ಮಾತನಾಡಿ ಎಸ್ಎಸ್ಪಿ ಸಂತೋಷ್ ಕುಮಾರ್, ಮಹಿಳಾ ಎಸ್‌ಐ ಆರೋಪಿಯನ್ನು ಮದುವೆಯಾಗುವವರಿದ್ದರು. ಆದರೆ ಆತ ಇದಕ್ಕೆ ಒಪ್ಪಿರಲಿಲ್ಲ. ಆಕೆ ಮೇಲೆ ಅತ್ಯಾಚಾರ ಎಸೆಗಿದ್ದು ಮಾತ್ರವಲ್ಲದೇ ಬ್ಲ್ಯಾಕ್ಮೇಲ್ ಕೂಡ ಮಾಡಿದ್ದರು. ಹೀಗಾಗಿ ಮಹಿಳಾ ಎಸ್‌ಐ ಒತ್ತಡದಿಂದ ಈ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಿದರು.
ಮಹಿಳಾ ಎಸ್‌ಐ ಹಾಗೂ ಆರೋಪಿ ಪರಸ್ಪರ 7 ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಅವರಿಬ್ಬರ ಕಾಲ್ ರೆಕಾರ್ಡ್ ಪ್ರಕಾರ ಅವರಿಬ್ಬರು ಪ್ರತಿ ದಿನ ಕನಿಷ್ಟ 25 ಬಾರಿ ಮಾತನಾಡುತ್ತಿದ್ದರು ಎನ್ನಲಾಗಿದೆ.
ಮೃತ ಎಸ್‌ಐ ಸಹೋದರ ಪ್ರಕರಣ ಸಂಬಂಧ ದೂರನ್ನು ದಾಖಲಿಸಿದ್ದಾರೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ