ಮಂಡ್ಯ : ನಾಗಮಂಗಲದ ಮಾವಿನಕೆರೆ ತೋಟದ ಮನೆಯೊಂದರಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದಾಗಲೇ ಡಿಹೆಚ್‍ಒ ಡಾ.ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು , ದಾಳಿ ವೇಳೆ ಭ್ರೂಣ ಹತ್ಯೆ ಕಿಟ್, ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ.
ಭ್ರೂಣ ಲಿಂಗ ಪತ್ತೆಗಾಗಿ ಕರೆತರಲಾಗಿದ್ದ ಹಾಸನ ಮೂಲದ ಗರ್ಭಿಣಿ ಮಹಿಳೆಯನ್ನು ಅಧಿಕಾರಿಗಳು ರಕ್ಷಿಸಿದ್ದು ,ದಾಳಿ ವೇಳೆ ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ.
ಪ್ರಕರಣಕ್ಕೆ ಸಂಬಂಧವುಳ್ಳ ಮನೆಯ ಮಾಲೀಕ ಧನಂಜಯ್, ಆರೋಗ್ಯ ಇಲಾಖೆಯ ಗ್ರೂಪ್ ಡಿ ನೌಕರೆಯೊಬ್ಬಳು ಸೇರಿದಂತೆ, ಗರ್ಭಿಣಿಯ ಪತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮ ಭ್ರೂಣ ಪತ್ತೆ ಕೇಂದ್ರವನ್ನು ಸೀಜ್ ಮಾಡಿದ್ದು, ಸ್ಕ್ಯಾನಿಂಗ್ ಮಷಿನ್ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ