ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

Team Newsnap
1 Min Read

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಆರೋಪಿಗಳ ಪಟ್ಟಿಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ನೀಡಿದ ದೂರು ಆಧರಿಸಿ ಮಾತಾ ಆಸ್ಪತ್ರೆ, ಆಯುರ್ವೇದಿಕ್‌ ಪೈಲ್ಸ್‌ ಡೇ ಕೇರ್‌ ಕೇಂದ್ರ ಹಾಗೂ ಚಾಮುಂಡೇಶ್ವರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯೂ ಇದ್ದಾರೆ.

ಪ್ರಮುಖ ಆರೋಪಿಗಳಾದ ಶಿವನಂಜೇಗೌಡ, ನಯನ್‌ ಕುಮಾರ್, ಸುನಂದಾ ಎಂಬುವರು ಲ್ಯಾಬ್‌ಗಳಿಗೆ ಪರೀಕ್ಷೆಗೆಂದು ಬರುತ್ತಿದ್ದ ಗರ್ಭಿಣಿಯರನ್ನು ಸಂಪರ್ಕಿಸಿ ಮಧ್ಯವರ್ತಿಗಳಾದ ಡಾ.ತುಳಸೀರಾಮ್, ಸಿದ್ದೇಶ್‌, ಪುಟ್ಟರಾಜು, ಎ.ಎಲ್‌.ಸತ್ಯ, ಅಭಿಷೇಕ್‌ ಗೌಡ, ಧನಂಜಯಗೌಡ ಎಂಬುವರ ಮೂಲಕ ಮಂಡ್ಯ ತಾಲ್ಲೂಕಿನ ಹಾಡ್ಯ ಗ್ರಾಮದ ಆಲೆಮನೆಯೊಂದರಲ್ಲಿ ಸ್ಕ್ಯಾನಿಂಗ್ ಯಂತ್ರ ಬಳಸಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದರು.

ಮೈಸೂರಿನ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರ ಗರ್ಭಪಾತ ಮಾಡಿಸಿ ಭ್ರೂಣಗಳನ್ನು ವಿಲೇವಾರಿ ಮಾಡುತ್ತಿದ್ದರು ಎಂದು ದೂರಲಾಗಿದೆ.

ವೈದ್ಯ ಚಂದನ್ ಬಲ್ಲಾಳ್, ಸಿಬ್ಬಂದಿ ಮೀನಾ, ರಿಜ್ಮಾ ಖಾನಂ, ನಿಸಾರ್‌ ಅಹಮದ್‌, ಮಂಜುಳಾ, ಉಷಾರಾಣಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮಧ್ಯವರ್ತಿಗಳ ಮೂಲಕ ಗರ್ಭಪಾತ ಮಾಡಿಸಿಕೊಂಡ ಮಹಿಳೆಯರ ಸಂಬಂಧಿಗಳು ನೀಡುತ್ತಿದ್ದ ಕಮಿಷನ್‌ ಅನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿಸಿಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಡಿಎಚ್‌ಒ ಡಾ.ಪಿ.ಸಿ. ಕುಮಾರಸ್ವಾಮಿ ” ಆರೋಗ್ಯ ಇಲಾಖೆ ಕೇಂದ್ರ ಕಚೇರಿಯಿಂದ ನೀಡಿದ ನಿರ್ದೇಶನದಂತೆ 17 ಮಂದಿ ವಿರುದ್ಧ ಎಫ್‌ಐಆರ್ ಮಾಡಿಸಿದ್ದೇವೆ ” ಎಂದು ಮಾಹಿತಿ ನೀಡಿದ್ದಾರೆ.

Share This Article
Leave a comment