ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ನಡೆದಿದೆ.
ದಾಳಿಗೆ ತತ್ತರಿಸಿದ ಕಂಜನ್ ಆನೆ ದಿಕ್ಕೆ ಕಾಣದಂತೆ ಅರಮನೆ ಆವರಣದಿಂದ ಹೊರ ಓಡಿದೆ .
ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಬಿಡಿಸಿಕೊಂಡು ಅರಮನೆಯಾಚೆಗೆ ಬಂದಿದ್ದು , ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಅವನನ್ನು ಹಿಡಿದು ತರಲು ಹರಸಾಹಸ ಪಡುತ್ತಿರುವ ದೃಶ್ಯಗಳೂ ಸೆರೆಯಾಗಿದೆ .
ಕಂಜನ್‌ನನ್ನು ನಿಯಂತ್ರಿಸಲು ಮಹೇಂದ್ರ ಆನೆಯು ಹಿಂದಿನಿಂದ ಓಡಿದ್ದು ,ಆನೆ ಓಡಿಬರುವುದನ್ನು ಜನರು ನೋಡಿ ದಿಕ್ಕಾಪಾಲಾಗಿ ಓಡಿದ್ದಾರೆ.
ಕಂಜನ್ ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿದ್ದನು.ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ
ಘಟನೆಯು ರಾತ್ರಿ 8ರ ಸುಮಾರು ನಡೆದಿದ್ದು ,ಮಾವುತರು ಕಾವಾಡಿಗರು ಸಮಾಧಾನ ಪಡಿಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು