July 7, 2022

Newsnap Kannada

The World at your finger tips!

bike , car, hit and run

Fight with a bike rider - Scorpio collides with a bike rider

ಬೈಕ್ ರೈಡ್ ರ್ ಜೊತೆ ಜಗಳ – ಬೈಕ್ ಸವಾರನಿಗೆ ಸ್ಕಾರ್ಪಿಯೋ ಡಿಕ್ಕಿ; ವೀಡಿಯೊ ಇಲ್ಲಿದೆ

Spread the love

ದೆಹಲಿಯ ಅರ್ಜನ್ ಗಢ್ ಮೆಟ್ರೋ ನಿಲ್ದಾಣದ ಬಳಿ ಬೈಕ್ ರೈಡ್ ಮಾಡುತ್ತಿದ್ದ ಗುಂಪಿನೊಂದಿಗೆ ಸ್ಕಾರ್ಪಿಯೋ ಡ್ರೈವರ್ ಮಾತಿಗೆ ಮಾತು ಬೆಳೆಸಿ ಜಗಳವಾಡಲು ಮುಂದಾಗಿದ್ದಾನೆ. ಇದು ಅತಿರೇಕಕ್ಕೆ ಹೋಗಿದ್ದು, ಆಕ್ರೋಶಗೊಂಡ ಡ್ರೈವರ್ ಬೇಕೆಂದು ಬೈಕ್‍ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ಸಂಪೂರ್ಣ ವೀಡಿಯೋವನ್ನು ಬೈಕ್ ಗುಂಪಿನ ಸವಾರರೊಬ್ಬರು ಫೋನ್‍ನಲ್ಲಿ ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಬೈಕರ್ ಅನುರಾಗ್ ಐ ಅಯ್ಯರ್ ಟ್ವೀಟ್‍ನಲ್ಲಿ, ಸ್ಕಾರ್ಪಿಯೋ ಕಾರ್ ಡ್ರೈವರ್ ನಮ್ಮ ಕೆಲವು ಸವಾರರನ್ನು ಕೊಲ್ಲುವುದಾಗಿ ಬೆಂದರಿಕೆ ಹಾಕಿದ್ದಾನೆ. ಅಲ್ಲದೇ ನಮ್ಮ ಸ್ನೇಹಿತನಿಗೆ ಬೇಕೆಂದು ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯಿಂದ ಯಾರಿಗೂ ತೀವ್ರವಾಗಿ ಗಾಯವಾಗಿಲ್ಲ ಎಂದು ಬರೆದು ವೀಡಿಯೋ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ –ಜೂನ್ 3 ನೇ ವಾರ ರಾಜ್ಯ ಸಚಿವ ಸಂಪುಟ ಪುನಾರಚನೆ : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಚಿಗುರಿದ ಆಸೆ

ಅನುರಾಗ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಿಎಂ ನರೇಂದ್ರ ಮೋದಿ ಮತ್ತು ದೆಹಲಿಯ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಅವರಿಗೆ ವೀಡಿಯೋ ಟ್ಯಾಗ್ ಮಾಡಿದ್ದು, ಇದಕ್ಕಾಗಿ ನಾವು ಮತ ಹಾಕುವುದಿಲ್ಲ ಮತ್ತು ತೆರಿಗೆ ಪಾವತಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯ ನಂತರ, ದೆಹಲಿ ಪೊಲೀಸರು ವಿಷಯದ ಬಗ್ಗೆ ಗಮನ ಹರಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

WhatsApp Image 2022 06 06 at 12.36.36 PM

ಗಾಯಗೊಂಡ ಬೈಕ್ ಸವಾರನ ಸ್ನೇಹಿತ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾನು ನನ್ನ 8 ರಿಂದ 10 ಸ್ನೇಹಿತರೊಂದಿಗೆ ಗುರುಗ್ರಾಮ್‍ನಿಂದ ದೆಹಲಿಗೆ ಹಿಂದಿರುಗುತ್ತಿದ್ದೆ. ಕಾರ್ ಡ್ರೈವರ್ ನಮ್ಮ ಬಳಿ ಬಂದು ರಾಶ್ ಡ್ರೈವಿಂಗ್ ಪ್ರಾರಂಭಿಸಿದನು. ಆತ ನನ್ನ ಸ್ನೇಹಿತನಿಗೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆ ನನ್ನ ಸ್ನೇಹಿತರು ಸ್ವಲ್ಪ ನಿಧಾನವಾಗಿ ರೈಡ್ ಮಾಡುತ್ತಿದ್ದೆವು. ಅವನೇ ವೇಗವಾಗಿ ಮುಂದೆ ಬಂದು ನನ್ನ ಸ್ನೇಹಿತನಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಿದರು.

error: Content is protected !!