ಹನಗೋಡು ಬಳಿ ಆನೆ ಜೊತೆ ಕಾದಾಟ – ದಸರಾ ಆನೆ ಗೋಪಾಲಸ್ವಾಮಿ ಸಾವು

Team Newsnap
0 Min Read

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಮತ್ತೊಂದು ಆನೆ ಜೊತೆ ನಡೆಸಿದ ಕಾದಾಟದಲ್ಲಿ ಸಾವನ್ನಪ್ಪಿದೆ.

ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆ ಜೊತೆ ಕಾದಾಟ ನಡೆಸಿ ಗೋಪಾಲಸ್ವಾಮಿ ಆನೆ ಮೃತಪಟ್ಟಿದೆ.11 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಒಮ್ಮೆ ಜನದಟ್ಟಣೆ ಹಾಗೂ ಪಟಾಕಿ ಶಬ್ದದಿಂದ ಗೋಪಾಲಸ್ವಾಮಿ ವಿಚಲಿತ ಆಗಿತ್ತು. 14 ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು.

Share This Article
Leave a comment