ತಮ್ಮ ಮೇಲೆ ಶೇ.40 ಕಮೀಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತು 18 ಮಂದಿ ವಿರುದ್ಧ ಕ್ರಿಮಿನಲ್ ಮಾನ ನಷ್ಟ ಪ್ರಕರಣ ಹೂಡಿದ್ದೇನೆ. ಸೆ.21ಕ್ಕೆ ಕೋರ್ಟ್‌ನಲ್ಲಿ ನನ್ನ ಹೇಳಿಕೆ ದಾಖಲಾಗುತ್ತದೆ. ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಾಗುತ್ತದೆ ಎಂದು ತೋಟಗಾರಿಕಾ ಸಚಿವ ಮುನಿರತ್ ಹೇಳಿದರು.
ನನ್ನ ವಿರುದ್ಧ ಮಾಡಿದ ಆರೋಪವು ಸೇರಿದಂತೆ 40% ಕಮೀಷನ್ ಆರೋಪಕ್ಕೆ ದಾಖಲೆ ಕೊಡಿ ಎಂದು ದಾವೆ ಹೂಡಿದ್ದೇನೆ. 50 ಕೋಟಿ ಮಾನನಷ್ಟ ಪ್ರಕರಣವನ್ನು 4 ತಿಂಗಳ ಒಳಗಡೆ ಇತ್ಯರ್ಥ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುತ್ತಿದ್ದೇವೆ.
ಸುದ್ದಿಗಾರರ ಜೊತೆ ಮಾತನಾಡಿದ ಮುನಿರತ್ನ ಅವರು, ಕೆಂಪಣ್ಣ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. ಆಧಾರ ರಹಿತ ಆರೋಪ ಮಾಡಿದ್ದಕ್ಕೆ ನಾನು 7 ದಿನಗಳ ಒಳಗಡೆ ಕ್ಷಮೆ ಕೇಳುವಂತೆ ಸೂಚಿಸಿದ್ದೆ. ಆದರೆ ಅವರು ಕ್ಷಮೆ ಕೇಳದ ಹಿನ್ನೆಲೆಯಲ್ಲಿ ಮಾನನಷ್ಟ ಕೇಸ್ ಹೂಡಿದ್ದೇನೆ. ಚುನಾವಣೆ ನಡೆಯುವ ಮುನ್ನ ಇತ್ಯರ್ಥ ಆಗಬೇಕಾಗಿರುವುದರಿಂದ 4 ತಿಂಗಳ ಒಳಗಡೆ ಪ್ರಕರಣವನ್ನು ಮುಗಿಸುವಂತೆ ಸೆಕ್ಷನ್ 227 ಅನ್ವಯ ರಿಟ್ ಅರ್ಜಿ ಹಾಕುತ್ತಿದ್ದೇವೆ ಎಂದು ಹೇಳಿದರು. ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು
ಪ್ರಕರಣದ ಆರೋಪಿಗಳು ಯಾವುದೇ ಆಸ್ತಿ ಪರಭಾರೆ ಮಾಡುವಂತಿಲ್ಲ. ಯಾವುದೇ ಇಲಾಖೆಯಲ್ಲಿ ಯಾವುದೇ ಕಾಮಗಾರಿ ಮಾಡಿದ್ದರೆ ಅದರ ಬಿಲ್ ಬಿಡುಗಡೆ ಆಗಬಾರದು. ಅವರ ಕುಟುಂಬದಲ್ಲಿ ಯಾವುದೇ ವಿಲ್ ಮಾಡುವಂತಿಲ್ಲ. ಎಲ್ಲದಕ್ಕೂ ಇನ್‌ಜಂಕ್ಷನ್ ಆರ್ಡರ್ ತರಲಾಗಿದ್ದು ಎಲ್ಲಾ 18 ಮಂದಿಗೂ ಇದು ಅನ್ವಯವಾಗಲಿದೆ ಎಂದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ