ತಮಿಳು ಸಿನಿಮಾ ರಂಗದ ನಟ ಇಂದ್ರಕುಮಾರ್ ಚೆನ್ನೈ ನಲ್ಲಿ ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚೆನ್ನೈನ ಪೆರಂಬಲೂರ್ ನ ಸ್ನೇಹೀತನ ಮನೆಯಲ್ಲಿ ಇಂದ್ರಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದ್ರಕುಮಾರ್ ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.
ಚಿತ್ರರಂಗದಲ್ಲಿ ನಟನೆಗೆ ಅವಕಾಶಗಳು ಇರಲಿಲ್ಲ. ಇದರಿಂದ ಇಂದ್ರಕುಮಾರ್ ಸಾಕಷ್ಟು ನಿರಾಸೆಗೊಂಡಿದ್ದರು.
ಇಷ್ಟೆ ಅಲ್ಲದೆ ಕೌಟುಂಬಿಕ ಜೀವನದಲ್ಲಿ ಕೂಡ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಪತ್ನಿಯಿಂದ ದೂರವಾಗಿದ್ದರು. ಈ ಎಲ್ಲಾ ಕಾರಣಗಳಿಗಾಗಿ ಇಂದ್ರಕುಮಾರ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಸಿನಿಮಾ ವೀಕ್ಷಣೆಗೆ ಸ್ನೇಹಿತನ ಮನೆಗೆ ಹೋಗಿದ್ದ ವೇಳೆ ಇಂದ್ರಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ನೇಹಿತನ್ನನ್ನು ವಿಚಾರಣೆಗೊಳಪಡಿಸಿದ್ದಾರೆ.
ಕಳೆದ ವಾರ ಎಂ.ಎಸ್.ಧೋನಿ ದ- ಅನ್ ಟೋಲ್ಡ್ ಸ್ಟೋರಿ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್ ನ ನಟ ಸಂದೀಪ್ ನಹಾರ್ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸ್ಮರಿಸಬಹುದು.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ