ಜ. 15 ಕ್ಕೂ ಮೊದಲು ಕಾಂಗ್ರೆಸ್ ನ 150 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ – ಖಂಡ್ರೆ

Team Newsnap
1 Min Read

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನವರಿ 15 ರೊಳಗೆ ಕನಿಷ್ಠ 150 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಮಾಡಲು ನಿರ್ಧರಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ರಾಯಚೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಖಂಡ್ರೆ ಅವರು, ರಾಜ್ಯ ಚುನಾವಣಾ ಸಮಿತಿ ಸಭೆಯ ಮಾರ್ಗಸೂಚಿಗಳನ್ನು ಕೊಡಲಾಗಿದೆ. ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಿಗೆ ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿವೆ. ಎಲ್ಲಾ ಮುಖಂಡರ ಅಭಿಪ್ರಾಯ ಪಡೆದು, ಅಂತಿಮವಾಗಿ ಮೂವರ ಪಟ್ಟಿ ಸಲ್ಲಿಸಲಾಗುವುದು. ಒಂದೊಂದು ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರನ್ನು ರಾಜ್ಯ ಚುನಾವಣಾ ಸಮಿತಿ ಹಾಗೂ ಎಐಸಿಸಿಗೆ ಕಳುಹಿಸುತ್ತೇವೆ ಎಂದು ತಿಳಿಸಿದರು.

ರಾಜ್ಯದ ಅನೇಕ ಕ್ಷೇತ್ರದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಹ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಬಿ ಫಾರಂ ಮಾತ್ರ ಒಬ್ಬರಿಗೆ ಕೊಡಬೇಕಾಗುತ್ತದೆ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲು ಒಪ್ಪಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ. ಹೀಗಾಗಿ ಪಕ್ಷಕ್ಕೆ ಯಾವುದೇ ಪರಿಣಾಮ ಆಗುವುದಿಲ್ಲ. ಪಕ್ಷ ಅಧಿಕಾರಕ್ಕೆ ಬಂದಾಗ ಸಂಘಟನೆ ಮಾಡಿದವರಿಗೆ ಅರ್ಹತೆಗೆ ತಕ್ಕ ಸ್ಥಾನಮಾನ ನೀಡುತ್ತೇವೆ ಎಂದು ತಿಳಿಸಿದರು.

Share This Article
Leave a comment