ರಾಜ್ಯ ವಿಧಾನಸಭಾ ಚುನಾವಣೆಗೆಗಾಗಿ ಬಿಜೆಪಿಯಿಂದ ಬಾಕಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂದು ಪಟ್ಟಿ ಬಿಡುಗಡೆ ಮಾಡಿರುವಂತ ಬಿಜೆಪಿ, ತೀವ್ರ ಕುತೂಹಲ ಕೆರಳಿಸಿದ್ದಂತ ಶಿವಮೊಗ್ಗ ಕ್ಷೇತ್ರಕ್ಕೆ ಚೆನ್ನ ಬಸಪ್ಪಗೆ ಟಿಕೆಟ್ ನೀಡಿದೆ.
ಈ ಮೂಲಕ ಪುತ್ರನಿಗೆ ಟಿಕೆಟ್ ನೀಡುವ ನಿರೀಕ್ಷೆಯಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ, ಟಿಕೆಟ್ ಗಾಗಿ ಬಂಡಾಯವೆದ್ದ ಆಯನೂರು ಮಂಜುನಾಥ್ ಗೆ ಬಿಗ್ ಶಾಕ್ ನೀಡಿದೆ.
ಮಾನ್ವಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ಬಿ.ವಿ ನಾಯ್ಕ್ ಗೆ ಟಿಕೆಟ್ ನೀಡಲಾಗಿದೆ. ಒಟ್ಟಾರೆ ಬಿಜೆಪಿಯಿಂದ 224 ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಮಂಡ್ಯ ಕ್ಷೇತ್ರಕ್ಕೆ ಬಿ ಆರ್ ರಾಮಚಂದ್ರಗೆ ಜೆಡಿಎಸ್ ಟಿಕೆಟ್ ಘೋಷಣೆ
ಬಿಜೆಪಿಯಿಂದ ಈಗಾಗಲೇ 222 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ಆದರೆ ಮಾನ್ವಿ ಮತ್ತು ಶಿವಮೊಗ್ಗ ವಿಧಾನ ಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರಲಿಲ್ಲ. ಇಂದು ಈ ಕ್ಷೇತ್ರಕ್ಕೆ ಕೊನೆಗೂ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು