ಇಂದಿನಿಂದ ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಗೆ 1 ಸಾವಿರ ರೂ. ದಂಡ ಪ್ರಯೋಗ ಮಾಡಲು ಬಿಬಿಎಂಪಿಯಿಂದ ಅಧಿಕೃತವಾಗಿ ಮಾರ್ಷಲ್ಗಳಿಗೆ ಸೂಚನೆ ನೀಡಿದೆ
ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯ ತೋರಿದ ಪ್ರಕರಣದಲ್ಲಿ ಬಿಬಿಎಂಪಿ ಮಾರ್ಷಲ್ಗಳು ನಿನ್ನೆ ಒಂದೇ ದಿನ 2,788 ಕೇಸ್ ಹಾಕಿದ್ದಾರೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಇರದವರಿಂದ 200, 300, 500 ರೂ. ದಂಡ ವಸೂಲಿ ಮಾಡಲಾಗಿದೆ. ಇಂದಿನಿಂದ ಮಾಸ್ಕ್ ಧರಿಸದವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ.
ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ ಒಟ್ಟು 5.65 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸುವರನ್ನು ಪತ್ತೆಹಚ್ಚಲು ಬಿಬಿಎಂಪಿ ಮಾರ್ಷಲ್ಗಳಿಗೆ ಗಸ್ತು ಪಡೆಯ ವಾಹನವನ್ನು ಕೂಡ ಕೊಡಲಾಗಿದೆ. ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ಬೇರೆ ಭಾಗದಲ್ಲಿ 500 ರೂಪಾಯಿ ದಂಡ ವಿಧಿಸಲಾಗುವುದು. ಸರ್ಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಬಿಬಿಎಂಪಿಗೆ ಸರ್ಕಾರ ಸೂಚನೆ ನೀಡಿದೆ.
ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರಾ ಎಂದು ಅಂಗಡಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅರ್ಧಂಬರ್ಧ ಮಾಸ್ಕ್ ಧರಿಸುವವರಿಗೂ ಸಹ ದಂಡಅನ್ವಯವಾಗಲಿದೆ. ಇತ್ತೀಚಿನ ದಿನಗಳಲ್ಲಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ 200 ರು ದಂಡವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲಿ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ