ಮಂಡ್ಯದ ವ್ಯಕ್ತಿಯನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ 11 ಮಂದಿ ವಿರುದ್ದ FIR : ಬಂಧನ

Team Newsnap
1 Min Read

ಮಂಡ್ಯದ ಮೂಲದ ಶ್ರೀಧರ ಗಂಗಾಧರ್ ಎಂಬುವವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಅತ್ತಾವರ 11 ಮಂದಿ ವಿರುದ್ಧ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೇ ತಿಂಗಳಿನಲ್ಲಿ ಶ್ರೀಧರ್ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋದ ಆರೋಪಿಗಳು, ಬನಶಂಕರಿಯ ಮಸೀದಿಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರೆಂದು ಆರೋಪ ಮಾಡಲಾಗಿದೆ.

ಮುಸ್ಲಿಂ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಮತಾಂತರದ ಬಗ್ಗೆ ಬಾಂಡ್ ಪೇಪರ್ ನಲ್ಲಿ ಸಹಿ ಹಾಕಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನು ಓದಿ : ಮಹಾಲಯ ಅಮಾವಾಸ್ಯೆ (ಪಿತೃಪಕ್ಷ)

ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿ ಬ್ಯಾಂಕ್ ಖಾತೆಗೆ 35 ಸಾವಿರ ವರ್ಗಾಯಿಸಿ, ತಾವು ಹೇಳಿದಂತೆ ಕೇಳಬೇಕು ಎಂದು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಶ್ರೀಧರ್ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ, ಸದ್ಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Leave a comment