ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ನರೇಂದ್ರ ಮೋದಿಗೂ ನಾಯಿಯ ಸಾವು ಬರುತ್ತದೆ ಎಂದು ಮುಂಬೈನ ನಾಗ್ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಬಳಸಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ವಿರುದ್ಧ ಬಿಜೆಪಿ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಹುಸೇನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಹಾಗೂ 48 ಗಂಟೆಗಳಲ್ಲಿ ಬಂಧಿಸುವಂತೆ ಒತ್ತಾಯಿಸಿದ್ದು, ವಿಫಲವಾದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಮಂಗಳವಾರ ಕೇಂದ್ರ ತನಿಖಾ ಸಂಸ್ಥೆಯು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ನಾಗ್ಪುರದ ಇಡಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು.
ಇದನ್ನು ಓದಿ –ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಲೋಕಾಯುಕ್ತ ಬಿ.ಎಸ್. ಪಾಟೀಲ್
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ಮತ್ತು ಮಾಜಿ ನಗರಾಧ್ಯಕ್ಷರು ಭಾಗವಹಿಸಿದ್ದರು.
ಈ ವೇಳೆ ಶೇಕ್ ಹುಸೇನ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ನರೇಂದ್ರ ಮೋದಿಗೂ ನಾಯಿಯ ಸಾವು ಬರುತ್ತದೆ ಎಂದು ಹೇಳಿದ್ದರು.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ