January 28, 2026

Newsnap Kannada

The World at your finger tips!

BJP, government , Politics

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

Spread the love

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಫೆಬ್ರವರಿ 10ರಂದು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಎದುರು ಮುಸ್ಲಿಂ ಯುವಕರ ಗುಂಪು ದಾಂಧಲೆ ನಡೆಸಿದ್ದ ಹಿನ್ನೆಲೆಯಲ್ಲಿ, ಈ ಪ್ರಕರಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಪ್ರತಾಪ್ ಸಿಂಹ ಅವರು ಮುಸ್ಲಿಂ ಸಮುದಾಯಕ್ಕೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಇದನ್ನು ಓದಿ –ಬೆಂಗಳೂರಿನಲ್ಲಿ ಸ್ನೇಹಿತನಿಂದ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ

ಅವರ ದೂರಿನ ಆಧಾರದಲ್ಲಿ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿಯುತ್ತಿದೆ.

error: Content is protected !!