ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಮಂಡ್ಯದಲ್ಲಿ FIR ದಾಖಲು ಮಾಡಲಾಗಿದೆ.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಮೇ 16ರಂದು ಮಂಡ್ಯದ ಹಲವು ಕಾಲೇಜುಗಳಲ್ಲಿ ಸಚಿವರು ಸಭೆ ನಡೆಸಿದ್ದರು.ಈ ಮೂಲಕ ಸಚಿವರೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ದೂರು ನೀಡಿದ್ದರು.
ಇದನ್ನು ಓದಿ –ರಾಜ್ಯದ ಮೂವರಿಗೆ ಐಎಎಸ್ ಹುದ್ದೆಗೆ ಸುಪ್ರೀಂ ಅಸ್ತು
ಈ ಹಿನ್ನೆಲೆಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 1860 ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1950, 1951 ಅಡಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು