ಉಡುಪಿಯ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ಇಂದು ಅಥವಾ ನಾಳೆ ಸಚಿವ ಈಶ್ವರಪ್ಪ ನನ್ನು ಬಂಧಿಸುವ ಸಾಧ್ಯತೆ ಇದೆ.
ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಎಫ್‍ಐಆರ್ ದಾಖಲಾಗಿದೆ.
ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರ ಅಡಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಈಶ್ವರಪ್ಪ ವಿರುದ್ಧ ಸಂತೋಷ್ ಸಹೋದರ ಪ್ರಶಾಂತ್ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ಸಂತೋಷ್ ಸಾವಿಗೆ ಕಮಿಷನ್ ಕಿರಿಕುಳವೆ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಸಂತೋಷ್ ಅವರು ಹಿಂಡಲಗಾ ದೇವಿ ಜಾತ್ರೆ ಕಾಮಗಾರಿ ವಹಿಸಿಕೊಂಡಿದ್ದರು. ಕಾಮಗಾರಿಯ 4 ಕೋಟಿ ಬಿಲ್ ಮಂಜೂರು ಮಾಡಲು ಸಂತೋಷ್ ಕೇಳಿದ್ದರು. ಆದರೆ ಈ ಬಿಲ್ ಮಂಜೂರು ಮಾಡಲು 40% ಕಮಿಷನ್ ಬೇಡಿಕೆಯಿಟ್ಟಿದ್ದರು. ಇದೀಗ ಕಮಿಷನ್ ಆರೋಪಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಸಂತೋಷ್ ಸಹೋದರ ಉಲ್ಲೇಖಿಸಿದ್ದಾರೆ.
ಬಿಲ್ ಮಂಜೂರು ಮಾಡಲು 40% ಕಮಿಷನ್ ಕೇಳಿದ್ದಾಗಿ ದೂರು ನೀಡಿದ್ದು, ಈಶ್ವರಪ್ಪ, ಬಸವರಾಜ್, ರಮೇಶ್ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
- ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ಗಳು ರದ್ದು: ಸರ್ಕಾರದಿಂದ ಸ್ಪಷ್ಟನೆ
- ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
More Stories
ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ಗಳು ರದ್ದು: ಸರ್ಕಾರದಿಂದ ಸ್ಪಷ್ಟನೆ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ