ರಾಜ ರಾಜೇಶ್ವರಿ ನಗರದ ಉಪಚುಣಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ವಿರುದ್ದ ಪೋಲೀಸರು ಮೊಕದ್ದಮೆ ದಾಖಲಿಸಿರುವದು ನಾಚಿಕೆಗೇಡಿನ ಸಂಗತಿ. ನಾವು ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ವಕ್ತಾರ ಎನ್. ಚೆಲುವರಾಯಸ್ವಾಮಿ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಚೆಲುವರಾಯಸ್ವಾಮಿ ‘ಬೇರೆ ಬೇರೆ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಅನೇಕ ಘಟನೆಗಳು ನಡೆದಿವೆ. ಆದರೆ ಕುಸುಮಾ ಅವರೊಬ್ಬರ ಮೇಲೆ ಮಾತ್ರ ಪ್ರಕರಣ ದಾಖಲಾಗಿದೆ. ರಾಜ್ಯದ ಬಿಜೆಪಿಯವರಿಗೆ ತಮ್ಮ ಪಕ್ಷ ಹಾಗೂ ಅಭ್ಯರ್ಥಿ
ಸಾಮಥ್ಯ೯ದ ಬಗ್ಗೆ ತಳಮಳ ಶುರುವಾಗಿದೆ. ನಮ್ಮ ಅಭ್ಯರ್ಥಿ ಕುಸುಮಾ ಗೆಲ್ಲುತ್ತಾರೆ ಎಂಬುದು ಈಗಾಗಲೇ ಗೊತ್ತಾಗಿದೆ. ಈ ಕಾರಣಕ್ಕಾಗಿ ಕುಸುಮಾ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಈ ಪ್ರಕರಣ ರಾಜಕೀಯ ಪ್ರೇರಿತ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ. ಆದರೆ ಬುದ್ದಿವಂತರಾದ ಆರ್‌ಆರ್ ನಗರದ ಮತದಾರರು ಚುಣಾವಣೆಯಲ್ಲಿ ಬಿಜೆಪಿಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಪೋಲೀಸರು ಕೂಡಲೇ ಕುಸುಮಾ ವಿರುದ್ಧ ದಾಖಲು ಮಾಡಿರುವ ಪ್ರಕರಣವನ್ನು ವಜಾ ಮಾಡಬೇಕು’ ಎಂದು ಆಗ್ರಹಿಸಿದರು.

ದಿವಂಗತ ಡಿ.ಕೆ. ರವಿ ಕೋಲಾರದ ಜಿಲ್ಲಾಧಿಕಾರಿಯಾಗಿದ್ದಾಗ ಅವರ ಪ್ರಾಮಾಣಿಕತೆ ದೇಶದಾದ್ಯಂತ ಜನಪ್ರಿಯವಾಗಿತ್ತು. ಕೋಲಾರದಲ್ಲಿನ ಡಿ.ಕೆ. ರವಿ ಅಭಿಮಾನಿಗಳು ಆರ್‌ಆರ್ ನಗರದಲ್ಲಿ ಸ್ಪರ್ಧಿಸುತ್ತಿರುವ ರವಿ ಪತ್ನಿ ಕುಸುಮಾ ಪರ ಅವಿರತವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಚೆಲುವರಾಯಸ್ವಾಮಿ ತಿಳಿಸಿದರು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು