March 14, 2026

Newsnap Kannada

The World at your finger tips!

WhatsApp Image 2024 09 30 at 5.40.57 PM

ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್

Spread the love

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರು ನಿವೇಶನ ಖರೀದಿಸಿದ ಸಂದರ್ಭದಲ್ಲಿ, ಅವರ ಬದಲಿಗೆ ಮುಡಾ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ ಎಂಬ ಸುಳ್ಳು ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಖರೀದಿದಾರರು ಉಪ ನೋಂದಣಾಧಿಕಾರಿ ಕಚೇರಿಗೆ ಹಾಜರಾಗದೇ ವಿನಾಯಿತಿ ಪಡೆದ ಪ್ರಕರಣಗಳಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖಿಸಲಾಗುತ್ತದೆ. ಆದರೆ ಖರೀದಿದಾರರೇ ಶುಲ್ಕ ಪಾವತಿಸಿದ್ದಾರೆ ಎಂಬ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದಾರೆ.₹5.50 ಲಕ್ಷ ಮೌಲ್ಯದ ಡ್ರಗ್ಸ್‌ ಜಪ್ತಿ, ಇಬ್ಬರು ಬಂಧನ

ಈ ಆರೋಪದ ಬಗ್ಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ದೂರು ದಾಖಲಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರು ಕೋರ್ಟ್ ಅನುಮತಿ ಪಡೆದು ಪ್ರಕರಣ ದಾಖಲಿಸಿದ್ದಾರೆ.

error: Content is protected !!