ಬೆಂಗಳೂರಿನ ಟೌನ್ ಹಾಲ್ ಮುಂಭಾಗ, ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಬಗ್ಗೆ ಪ್ರತ್ಯೇಕ ಎರಡು ದೂರು ದಾಖಲಾದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್, ಬ್ಯಾನರ್ ನಿಷೇಧಿಸಿ ಬಿಬಿಎಂಪಿ ಮತ್ತು ಸರ್ಕಾರ ಆದೇಶಿಸಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದೀಗ ನಗರದಲ್ಲಿ ಅಳವಡಿಸುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ಮತ್ತು ಕಾನೂನು ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕೋರ್ಟ್ ಆದೇಶಿಸಿದೆ.
ಈ ನಡುವೆ ಬಿ.ಕೆ ಹರಿಪ್ರಸಾದ್‍ಗೆ ಅಭಿನಂದನಾ ಸಮಾರಂಭದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ವೃತ್ತದ ಸುತ್ತಮುತ್ತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ ಈ ಬಗ್ಗೆ ಕ್ರಮ ವಹಿಸಬೇಕಾಗಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರು ದಾಖಲಾಗಿತ್ತು.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು