January 29, 2026

Newsnap Kannada

The World at your finger tips!

dks

ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ವಿರುದ್ಧ ಎಫ್ ಐ ಆರ್ ದಾಖಲು

Spread the love

ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ವೇಳೆ ಕಲಾವಿದರತ್ತ 500 ರು ನೋಟುಗಳನ್ನು ಎಸೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್‌ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಆಯೋಜನೆಗೊಂಡಿತ್ತು.

ಮಂಡ್ಯ ತಾಲ್ಲೂಕಿನ ಕ್ಯಾತುಂಗೆರೆಯಿಂದ ಡಿ.ಕೆ.ಶಿವಕುಮಾರ್ ರೋಡ್‌ ಶೋ ಆರಂಭಿಸಿದ್ದರು. ಈ ವೇಳೆ ಜಾನಪದ ಕಲಾ ತಂಡಗಳ ಕಲಾವಿದರು ಡಿಕೆಶಿ ಅವರನ್ನು ಹಣ ಕೊಡುವಂತೆ ಕೋರಿದ್ದರು. ಈ ಸಂದರ್ಭದಲ್ಲಿ ಅವರು ವಾಹನದ ಮೇಲಿಂದ ಕಲಾವಿದರತ್ತ 500 ರು ನೋಟುಗಳ ಹಣದ ಕಟ್ಟು ಎಸೆದಿದ್ದರು.

ನಂತರ ಹಣ ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಇದರ ವಿರುದ್ಧ ಚುನಾವಣೆ ಸೆಕ್ಟರ್‌ ಅಧಿಕಾರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಏ.2ರಂದು ಗ್ರಾಮಾಂತರ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ.ಇದನ್ನು ಓದಿ –ರಾಹುಲ್ ಗೆ ಏ. 13 ರ ತನಕ ಜಾಮೀನು ವಿಸ್ತರಣೆ

error: Content is protected !!