ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಮೈಸೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರು ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿರುವ ಅನ್ವಯ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಪ್ರತಾಪ್ ಸಿಂಹ ಹೇಳಿದ್ದೇನು..?
ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ , ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ , ದ್ವೇಷದ ರಾಜಕಾರಣ ಮಾಡಬೇಡಿ ಎಂದು ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿನಡೆಸಿದ್ದಾರೆ.
ರಾಜ್ಯದಲ್ಲಿ 28 ಜನ ಸಂಸದರಿದ್ಧಾರೆ . ಆದರೆ ಪ್ರತಾಪ್ ಸಿಂಹನ ಮಾತ್ರ ಟಾರ್ಗೆಟ್ ಮಾಡುತ್ತಾರೆ ಏಕೆ?. ನಾನು ಸೋಮಾರಿ ಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ.ಡಿಸೆಂಬರ್ 26 ರಿಂದ ಯುವ ನಿಧಿ ಯೋಜನೆಗೆ ನೋಂದಣಿ ಪ್ರಾರಂಭ ,ಅರ್ಹರು ನೋಂದಣಿ ಮಾಡಿಕೊಳ್ಳಿ : ಆರ್ ಲೋಕನಾಥ್
ಸಿದ್ದರಾಮಯ್ಯನವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ .
More Stories
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ