ಕೇಂದ್ರ ಸಚಿವ V.ಸೋಮಣ್ಣ ಪುತ್ರನ ವಿರುದ್ಧ ‘FIR’ ದಾಖಲು

Team Newsnap
1 Min Read

ಬೆಂಗಳೂರು : ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ವಂಚನೆ, ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ FIR ದಾಖಲಾಗಿದೆ.

ತೃಪ್ತಿ ಹೆಗಡೆ ಎಂಬುವವರು ವಂಚನೆ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ , ಖಾಸಗಿ ದೂರಿನ ಅರ್ಜಿಯ ವಿಚಾರಣೆ ನಡೆಸಿದ ನಗರದ 37 ನೇ ಎಸಿಎಂಎಂ ಕೋರ್ಟ್ ತನಿಖೆ ನಡೆಸುವಂತೆ ಆದೇಶಿಸಿತ್ತು .

ಜೀವನ್ ಕುಮಾರ್ ಮತ್ತು ಪ್ರಮೋದ್ ರಾವ್ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು ದಾಖಲಾಗಿದೆ.

ನೈಬರ್ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಅರುಣ್ ಮತ್ತು ಮಧ್ವರಾಜ್ ಜಂಟಿಯಾಗಿ ಆರಂಭಿಸಿದ್ದು ,ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿ ಅರುಣ್ ಸೋಮಣ್ಣ ವಹಿಸಿಕೊಂಡಿದ್ದಾರೆ.

ವ್ಯವಹಾರದಲ್ಲಿ ನಷ್ಟವಾದಾಗ ಮಧ್ವರಾಜ್ ಅವರು ಅರುಣ್ ಬಳಿ ವಿಚಾರಿಸಿದ್ದು ,ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ. ನಂತರ ಅರುಣ್ ಅವರು ಮಧ್ವರಾಜ್ ಅವರನ್ನು ಕಂಪನಿಯ ಪಾಲುದಾರಿಕೆಗೆ ರಾಜೀನಾಮೆ ಕೊಡುವಂತೆ ಕಿರುಕುಳ ನೀಡಿದ್ದಾರೆ .ದರ್ಶನ್‌ ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್ ನಾಪತ್ತೆ ? 

ಕಿರುಕುಳ ನೀಡಿ ನಷ್ಟ ಆಗಿದ್ದ ಹಣವನ್ನು ನೀಡುವಂತೆ ಬೆದರಿಸಿ, ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪ ಕೇಳಿಬಂದಿದ್ದು , ಸಂಜಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share This Article
Leave a comment