April 11, 2026

Newsnap Kannada

The World at your finger tips!

sidda

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಡಿಕೇರಿಯಲ್ಲಿ ಎಫ್ ಐ ಆರ್ ?

Spread the love

ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಾಗಿದೆ.

ಕೊಡವರ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಮಾಜಿ ಸಿಎಂ ವಿರುದ್ಧ ರವಿ ಕುಶಲಪ್ಪ ಎನ್ನುವವರು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿದ್ದ ಸಿದ್ದರಾಮಯ್ಯ ನವರ ಮಾತುಗಳು ನಮ್ಮ ಭಾವನೆಗಳಿಗೆ ಧಕ್ಕೆ ಉಂಟು ಮಾಡಿವೆ. ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ರವಿ ದೂರು ಸಲ್ಲಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಎಫ್‌ಐಆರ್‌ ದಾಖಲು ಮಾಡಿದ್ದಾರೆಂದು ತಿಳಿದು ಬಂದಿದೆ.

error: Content is protected !!