ಉದಯನಿಧಿ ಪ್ರಿಯಾಂಕ್ ಖರ್ಗೆ ವಿರುದ್ಧ ಉ.ಪ್ರದೇಶದಲ್ಲಿ FIR ದಾಖಲು

Team Newsnap
1 Min Read

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿFIR ದಾಖಲಾಗಿದೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಕರೆ ನೀಡಿದ್ದಕ್ಕಾಗಿ ಸ್ಟಾಲಿನ್ ಹಾಗೂ ಮತ್ತು ಸ್ಟಾಲಿನ್ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಖರ್ಗೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸ್ಟಾಲಿನ್ ಅವರ ಹೇಳಿಕೆಯ ಬಗ್ಗೆ ಮಾಧ್ಯಮ ವರದಿಗಳನ್ನು ಎತ್ತಿ ತೋರಿಸಿದ ವಕೀಲರಾದ ಹರ್ಷ ಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ FIR ದಾಖಲಿಸಲಾಗಿದೆ.

ತಮಿಳುನಾಡಿನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳಿಗೆ ಹೋಲಿಸಿ ವಿವಾದ ಸೃಷ್ಟಿಸಿದ್ದರು.

Share This Article
Leave a comment