ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.
ಪ್ರತಾಪ್ ಸಿಂಹ ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದು ,ಮುಸ್ಲಿಮರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣುತ್ತ ಇದೆ.ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರತಾಪ್ ಸಿಂಹ ಮಾತನಾಡಿದ್ದಾರೆ.
ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದಿದ್ದು ,ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂಡಾ ಹಗರಣ : ಸಿಎಂ ವಿರುದ್ಧ ತನಿಖೆಗೆ ಕೋರ್ಟ್ ಅಸ್ತು – ಸಿದ್ದುಗೆ ಸಂಕಷ್ಟ
ಬಿಎನ್‌ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು