May 21, 2022

Newsnap Kannada

The World at your finger tips!

gorak pur

ದೆಹಲಿಯಲ್ಲಿ ಗುಡಿಸಲಿಗೆ ಬೆಂಕಿ: ಏಳು ಮಂದಿ ಸಜೀವ ದಹನ – ಹಲವರಿಗೆ ಗಾಯ

Spread the love

ದೆಹಲಿಯ ಗೋಕುಲ್​ಪುರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 7 ಮಂದಿ ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಕನಿಷ್ಟ 60 ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದೆ. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಲಾಗಿದೆ. 13 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಬೆಂಕಿಯಲ್ಲಿ ಸುಟ್ಟು ಹೋಗಿರುವ 7 ಮೃತದೇಹಗಳು ಪತ್ತೆಯಾಗಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ. ನಿದ್ರೆಗೆ ಜಾರಿದ್ದವರು ಬೆಂಕಿ ಅನಾಹುತದಲ್ಲಿ ಸಾವಿಗೀಡಾಗಿದ್ದಾರೆ

ಅಗ್ನಿ ದುರಂತಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಂಬನಿ ಮಿಡಿದಿದ್ದಾರೆ. ಅಲ್ಲದೇ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದೆ. ಅಲ್ಲದೇ ಮೃತರ ಕುಟುಂಬಕ್ಕೆ ಒಂದು ಕೋಟಿ ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ.

error: Content is protected !!