ಕಳೆದ ಮೂರು ದಿನಗಳ ಹಿಂದಷ್ಟೇ ಮುಂಬೈನ ಆಸ್ಪತ್ರೆಯಲ್ಲಿ ಆ್ಯಕ್ಸಿಜನ್ ಸೋರಿಕೆಯಿಂದ 24 ಮಂದಿ ದುರಂತ ಸಾವು ಕಂಡ ಬೆನ್ನಲ್ಲೇ ಈಗ ಮತ್ತೊಂದು ದುರಂತದಲ್ಲಿ ಮುಂಬೈನ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡದಲ್ಲಿ 13 ಮಂದಿ ಸಜೀವ ದಹನಗೊಂಡ ಘಟನೆ ಜರುಗಿದೆ.
ಮುಂಬೈನ ವಿರಾರ್ ವೆಸ್ಟ್ ನ ವಿಜಯ್ ವಲ್ಲಭ ಕೋವಿಡ್ ಕೇರ್ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಶುಕ್ರವಾರ ಬೆಳಿಗ್ಗೆ 3.15 ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತು. ಅಗ್ನಿ ದುರಂತದಲ್ಲಿ 13 ಕೊರೊನಾ ಸೋಂಕಿತರು ಸಜೀವ ದಹನಗೊಂಡರು.
ಅಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ 17 ಕೊರೊನಾ ಸೋಂಕಿತರು ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಗ್ನಿ ದುರಂತದಲ್ಲಿ 13 ಜನರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ