ಬೆಂಗಳೂರಿನ ವೀರಭದ್ರ ನಗರದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಅಗ್ನಿ ಅನಾಹುತದಿಂದ ಹದಿನೈದಕ್ಕೂ ಹೆಚ್ಚು ಖಾಸಗಿ ಬಸ್ಸುಗಳು ಸುಟ್ಟು ಭಸ್ಮವಾಗಿವೆ. ಅಗ್ನಿವಘಡದಿಂದ ಬೆಂಕಿ ಮುಗಿಲೆತ್ತರಕ್ಕೆ ಹೊತ್ತಿ ಉರಿದಿದೆ. ಈ ವೇಳೆ ಸುತ್ತಮುತ್ತಲಿನ ಬಸ್ ಗಳಿಗೂ ಬೆಂಕಿ ವ್ಯಾಪಿಸಿದೆ.
ಮೂಲಗಳ ಪ್ರಕಾರ ಬೆಂಕಿ ಹತ್ತಲು ಪ್ರಮುಖ ಕಾರಣ ಬಸ್ ಗಳ ರಿಪೇರಿ ಆಗಿರಬಹುದು ಅಥವಾ ಯಾವುದೇ ಸಮಸ್ಯೆ ಅಥವಾ ತೊಂದರೆ ಕಾಣಿಸಿಕೊಂಡಲ್ಲಿ ಅವುಗಳನ್ನು ದುರಸ್ತಿ ಮಾಡುವ ಸಂದರ್ಭದಲ್ಲಿ ಅಲ್ಲಿನ ಕೆಲವು ಕೆಲಸಗಾರರು ವೆಲ್ಡಿಂಗ್ ಮಾಡುತ್ತಿರುವಾಗ ಅದರ ಕಿಡಿ ಹಾರಿದ ಪರಿಣಾಮ ಈ ಅಗ್ನಿ ಅವಘಡಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಮುಗಿಲೆತ್ತರಕ್ಕೆ ಹೊತ್ತಿ ಉರಿದ ಬೆಂಕಿಯ ಕೆನ್ನಾಲಗೆಗೆ ಹದಿನೈದಕ್ಕೂ ಹೆಚ್ಚು ಬಸ್ ಗಳು ಭಸ್ಮವಾಗಿವೆ. ತಕ್ಷಣ 2 ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಮುಂದುವರಿಸಿದ್ದಾರೆ. ಕತಾರ್‌ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್
ಅತ್ತಿಬೆಲೆಯ ಪಟಾಕಿ ದುರಂತ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಈ ರೀತಿ ಇನ್ನೊಂದು ಬೆಂಕಿ ಅವಘಡ ಸಂಭವಿಸಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು