ಬೆಂಗಳೂರು: ನಗರದ ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆಯ ಮೈದಾನದಲ್ಲಿ ಭೀಕರ ಬೆಂಕಿ ಅನಾಹುತ ಸಂಭವಿಸಿದ್ದು, 100ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಈ ಮೈದಾನದಲ್ಲಿ ಪೊಲೀಸರು ಜಪ್ತಿ ಮಾಡಿದ್ದ ವಾಹನಗಳನ್ನು ಪಾರ್ಕ್ ಮಾಡಿದ್ದರು. ಆದರೆ, ಮೈದಾನದಲ್ಲಿ ಹುಲ್ಲು ಗಿಡಗಳು ಬೆಳೆದುಕೊಂಡಿದ್ದರಿಂದ ಬೆಂಕಿ ವೇಗವಾಗಿ ಹರಡಿದ್ದು, ಐದು ಕಾರುಗಳು, ಐದು ಆಟೋಗಳು ಹಾಗೂ 80ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಘಟನೆಯ ಮೂಲ ಕಾರಣ , ಯಾರೋ ಸಿಗರೇಟು ಹೊತ್ತಿಸಿ ಕಡ್ಡಿ ಎಸೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಹೆಚ್ಚಿನ ಹಾನಿ ತಡೆಯಲು ಕ್ರಮ ಕೈಗೊಂಡಿದೆ.ಇದನ್ನು ಓದಿ –ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ, ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ
ಸ್ಥಳೀಯರು ಹಾಗೂ ಪೊಲೀಸರು ಸ್ಥಳದಲ್ಲಿ ಪರಸ್ಪರ ಸಹಕಾರ ನೀಡಿದ್ದು, ಈ ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು