March 14, 2025

Newsnap Kannada

The World at your finger tips!

fire accident

ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ – ಇಬ್ಬರು ಕಾರ್ಮಿಕರ ದುರ್ಮರಣ

Spread the love

ಬೆಂಗಳೂರು: ಮಾಗಡಿ ರಸ್ತೆಯ ಸೀಗೆಹಳ್ಳಿ ಶಿವಾನಿ ಗ್ರೀನ್ಸ್ ಲೇಔಟ್‌ನಲ್ಲಿ ನಿರ್ಮಾಣ ಹಂತದ ಮೂರಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸೋರಿಕೆಯಿಂದ ಭಾರೀ ಅಗ್ನಿ ಅವಘಡ ಸಂಭವಿಸಿ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತರನ್ನು ಉತ್ತರ ಪ್ರದೇಶ ಮೂಲದ ಉದಯ್ ಬಾನು (40) ಮತ್ತು ಬಿಹಾರ ಮೂಲದ ರೋಶನ್ (23) ಎಂದು ಗುರುತಿಸಲಾಗಿದೆ. ಸತೀಶ್ ಎಂಬುವವರಿಗೆ ಸೇರಿದ ಈ ಕಟ್ಟಡದಲ್ಲಿ ವುಡ್ ವರ್ಕ್ಸ್ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ತಗುಲಿ ಕಟ್ಟಡ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕಟ್ಟಡದಲ್ಲಿ ಒಟ್ಟು ಆರು ಮಂದಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಇಬ್ಬರು ಬೆಂಕಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಇದನ್ನು ಓದಿ –ಫೆ. 8ಕ್ಕೆ CCL ಉದ್ಘಾಟನೆ – DCM DK ಶಿವಕುಮಾರ್ ಅವರನ್ನು ಆಹ್ವಾನಿಸಿದ ನಟ ಕಿಚ್ಚ ಸುದೀಪ್

ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದ್ದು, ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!