ಕೋಲ್ಕತ್ತಾದ ಸ್ಕ್ಯಾಂಡ್ ರಸ್ತೆಯ ಕಟ್ಟಡ 13ನೇ ಮಹಡಿಯಲ್ಲಿ ಬೆಂಕಿ ಅನಾಹುತ ದಲ್ಲಿ 9 ಜನ ಸಜೀವ ದಹನವಾದವ ಘಟನೆ ಕಳೆದ ರಾತ್ರಿ ಸಂಭವಿಸಿದೆ.
ಬೆಂಕಿ ತೀವ್ರತೆಗೆ ಕಟ್ಟಡದಿಂದ ಹೊರ ಬರಲಾದೇ ಈ ಒಂಬತ್ತು ಜನರು ಸಜೀವ ದಹನವಾಗಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸುಜಿತ್ ಬೋಸ ಸುದ್ದಿಗಾರರ ಜೊತೆ ಮಾತನಾಡಿ, ಇಬ್ಬರು ಸಿಆರ್ ಪಿ ಫ್ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಎಂಟು ಜನ ಕಾಣಿಸುತ್ತಿಲ್ಲ. ಬೆಂಕಿ ನಿಯಂತ್ರಣಕ್ಕೆ ತರಲಾಗಿದೆ, ಕಾಣೆಯಾದವರ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಬೆಂಕಿ ನಂದಿಸಲು ತೆರಳಿದ್ದ ಸಿಬ್ಬಂದಿ ಸಹ ಕಟ್ಟಡದಲ್ಲಿ ಸಿಲುಕಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಟ್ಟಡದ ಮುಂಭಾಗಿನ ರಸ್ತೆಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್ ಮಾಡಲಾಗಿತ್ತು.
ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಿದ ಪೊಲೀಸ್ ಕಮೀಷನರ್ ಅವರಿಂದ ಮಾಹಿತಿ ಪಡೆದುಕೊಂಡರು.
ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ಸಹ ನೀಡಲಾಗುವುದು ಎಂದು ಘೋಷಿಸಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ